ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಈ ಕುರಿತು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು.
ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ಸಿಎಂ ಸ್ಟಾಲಿನ್ ಮಗ ಉದಯನಿಧಿ ಸಚಿವರಾಗಿ ಪ್ರಮಾಣವಚನ
ಖಾಲಿ ಹುದ್ದೆಗಳನ್ನು ಸಕಾಲಕ್ಕೆ ಭರ್ತಿ ಮಾಡಲಾಗುತ್ತದೆ. ಈ ಸಂಬಂಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
1,472 ಐಎಎಸ್ ಹುದ್ದೆಗಳು ಖಾಲಿ...
ಮಗದೊಂದು ಪ್ರಶ್ನೆಗೆ ಉತ್ತರಿಸಿದ ಜಿತೇಂದ್ರ ಸಿಂಗ್, ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,472 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.