ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕೆಲಸಗಳಲ್ಲಿ ಹಿಂದಿ ಬಳಕೆ ಹೆಚ್ಚಿಸಲು ಕೇಂದ್ರ ಸಚಿವ ಅಜಯ್ ಮಿಶ್ರಾ ಕರೆ

Last Updated 13 ನವೆಂಬರ್ 2021, 8:20 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಕೆಲಸಗಳಲ್ಲಿ ಹೆಚ್ಚೆಚ್ಚು ಹಿಂದಿ ಭಾಷೆಯನ್ನು ಬಳಸಬೇಕು ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಕುಮಾರ್ ಮಿಶ್ರಾ ಕರೆ ನೀಡಿದ್ದಾರೆ.

‘ಭಾರತೀಯ ರಾಜಭಾಷಾ (ಅಧಿಕೃತ ಭಾಷೆ) ಸಮ್ಮೇಳನ’ದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಿಂದ ಪ್ರೇರಣೆ ಪಡೆದು ಇತರ ಎಲ್ಲ ಇಲಾಖೆಗಳ ಸದಸ್ಯರೂ ಸಮ್ಮೇಳನದಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದ್ದಾರೆ.

‘ಸಾಂವಿಧಾನಿಕ ಹೊಣೆಗಾರಿಕೆ ನಮಗೆ ಮುಖ್ಯವಾಗಬೇಕು ಮತ್ತು ಸರ್ಕಾರಿ ಕೆಲಸಗಳಲ್ಲಿ ಹೆಚ್ಚೆಚ್ಚು ಹಿಂದಿ ಭಾಷೆಯನ್ನೇ ಬಳಸಬೇಕು ಎಂಬುದನ್ನು ಎಲ್ಲರಿಗೂ ನೆನಪಿಸುವ ಪ್ರಯತ್ನ ಈ ಸಮ್ಮೇಳನ’ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಹಿಂದಿ ಭಾಷೆಯನ್ನು ಪ್ರಮುಖ ಕೊಂಡಿಯನ್ನಾಗಿ ಪರಿಗಣಿಸಲಾಗಿತ್ತು ಎಂದೂ ಅವರು ಹೇಳಿದ್ದಾರೆ.

‘ಸ್ವಾತಂತ್ರ್ಯ ಚಳವಳಿಯಲ್ಲಿ ಹಿಂದಿಯು ಪ್ರಮುಖ ಭಾಷೆಯಾಗಿತ್ತಲ್ಲದೆ ಇಡೀ ದೇಶವನ್ನು ಒಗ್ಗೂಡಿಸಿತ್ತು. ಸ್ವಾತಂತ್ರ್ಯ ದೊರೆತ ಬಳಿಕ, 1949ರ ಸೆಪ್ಟೆಂಬರ್ 14ರಂದು ಸಂವಿಧಾನಸಭೆಯು ಹಿಂದಿಯನ್ನು ದೇಶದ ಅಧಿಕೃತ ಭಾಷೆ ಎಂದು ಸರ್ವಾನುಮತದಿಂದ ಘೋಷಿಸಿತ್ತು’ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 3ರಂದು ನಡೆದ ಹಿಂಸಾಚಾರದಲ್ಲಿ ಅಜಯ್ ಕುಮಾರ್ ಮಿಶ್ರಾ ಮಗ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT