ಕಾಶ್ಮೀರದಲ್ಲಿ ಶೂನ್ಯಕ್ಕಿಂತ ಕೆಳಗೆ ಇಳಿದ ತಾಪಮಾನ

ಶ್ರೀನಗರ: ಕಾಶ್ಮೀರದಲ್ಲಿ ಚಳಿಯ ವಾತಾವರಣ ಹೆಚ್ಚುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ರಾತ್ರಿ ತಾಪಮಾನವು ಶೂನ್ಯಕ್ಕಿಂತಲೂ ಕಡಿಮೆಯಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
‘ದಕ್ಷಿಣ ಕಾಶ್ಮೀರದ ಕೋಕರನಾಗ್ ಹೊರತುಪಡಿಸಿ ಇತರೆಡೆಗಳಲ್ಲಿ ಮಂಗಳವಾರ ರಾತ್ರಿ ತಾಪಮಾನವು ಶೂನ್ಯಕ್ಕಿಂತ ಕಡಿಮೆಯಿದೆ’ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಗುಲ್ಮಾರ್ಗ್‌ದಲ್ಲಿ –3.8, ಪಹಲಗಾಮ್‌ನಲ್ಲಿ –4.8, ಕಾಜಿಗುಂಡ್‌ನಲ್ಲಿ –1.6, ಕುಪ್ವಾರಾದಲ್ಲಿ –2.9 ಡಿಗ್ರಿ ಸೆಲ್ಸಿಯಸ್‌ಗಳಷ್ಟು ತಾಪಮಾನ ದಾಖಲಾಗಿದೆ.
ಲೇಹ್‌ನಲ್ಲಿ –9.6 ಹಾಗೂ ದ್ರಾಸ್‌ನಲ್ಲಿ –13.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ತಾಪಮಾನ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.