ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈ: ಚೀನಾದಿಂದ ಆಗಮಿಸಿದ ತಾಯಿ ಮತ್ತು ಮಗಳಿಗೆ ಕೋವಿಡ್ ದೃಢ

Last Updated 28 ಡಿಸೆಂಬರ್ 2022, 5:32 IST
ಅಕ್ಷರ ಗಾತ್ರ

ಚೆನ್ನೈ: ಚೀನಾದಿಂದ ಶ್ರೀಲಂಕಾದ ಕೊಲಂಬೊ ಮಾರ್ಗವಾಗಿ ಮಧುರೈ ವಿಮಾನನಿಲ್ದಾಣದಲ್ಲಿ ಬಂದಿಳಿದ ತಾಯಿ ಮತ್ತು 6 ವರ್ಷದ ಮಗಳಿಗೆ ಕೋವಿಡ್ ದೃಢಪಟ್ಟಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧುರೈ ಬಳಿಯ ವಿರುದುನಗರ ಮೂಲದ ಮಹಿಳೆ ಮತ್ತು ಅವರ ಮಗಳು ಮಂಗಳವಾರ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ಅವರು ಹೇಳಿದ್ದಾರೆ.

ಇಬ್ಬರೂ ವಿರುದುನಗರದಲ್ಲಿ ಹೋಮ್‌ ಐಸೋಲೇಶನ್‌ನಲ್ಲಿದ್ದಾರೆ. ಅವರ ಮಾದರಿಗಳನ್ನು ಜಿನೋಮಿಕ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳವಾರ, ತಮಿಳುನಾಡಿನಲ್ಲಿ ಹೊಸದಾಗಿ 10 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 51ಕ್ಕೆ ಏರಿದೆ.

ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹಠಾತ್ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಅಲ್ಲಿನ ನಾಲ್ಕೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುತ್ತಿರುವ ಎಲ್ಲಾ ಪ್ರಯಾಣಿಕರ ತಪಾಸಣೆಯನ್ನು ತೀವ್ರಗೊಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT