ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಮಿತಿ ವಿಸ್ತರಣೆ: ಸುಪ್ರೀಂಗೆ ಮರುಮನವಿ ಸಲ್ಲಿಸುವಂತೆ ಫಡಣವೀಸ್ ಆಗ್ರಹ

Last Updated 14 ಮೇ 2021, 16:23 IST
ಅಕ್ಷರ ಗಾತ್ರ

ಮುಂಬೈ: ಮೀಸಲಾತಿಯ ಗರಿಷ್ಠ ಮಿತಿ ಶೇ 50 ಇರುವುದನ್ನು ವಿಸ್ತರಣೆ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಗ್ಪುರ ವಿಮಾನ ನಿಲ್ದಾಣದಲ್ಲಿ ವರದಿಗಾರರ ಜತೆ ಮಾತನಾಡಿದ ಅವರು, ಉದ್ಧವ್ ಠಾಕ್ರೆ ನೇತೃತ್ವದ ‘ಮಹಾ ವಿಕಾಸ್ ಅಘಾಡಿ’ ಸರ್ಕಾರವೇ ಮರಾಠ ಮೀಸಲಾತಿಗೆ ಅಡ್ಡಗಾಲಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

ಮೇ 5 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಮರುದಿನವೇ ಅವರು ಈ ಹೇಳಿಕೆ ನೀಡಿದ್ದಾರೆ.

‘ತೀರ್ಪನ್ನು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದೆ. ರಾಜ್ಯ ಸರ್ಕಾರವು ಇನ್ನೂ ಮನವಿ ಅರ್ಜಿ ಸಲ್ಲಿಸಿಲ್ಲ’ ಎಂದು ಫಡಣವೀಸ್ ಹೇಳಿದ್ದಾರೆ.

ಮರಾಠ ಸಮುದಾಯದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ದಾಖಲಾತಿಯಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ಕಾನೂನು ಅಸಿಂಧು ಎಂದು ಸುಪ್ರೀಂ ಕೋರ್ಟ್‌ ಮೇ 5ರಂದು ತೀರ್ಪು ನೀಡಿತ್ತು. ಜತೆಗೆ, ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಿಕೊಳ್ಳಲು ರಾಜ್ಯಗಳಿಗೆ ಅನುಮತಿ ನೀಡುವ ಬಗ್ಗೆ ವಿಚಾರಣೆಯನ್ನು ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ತಳ್ಳಿಹಾಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT