ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Last Updated 5 ಸೆಪ್ಟೆಂಬರ್ 2021, 10:48 IST
ಅಕ್ಷರ ಗಾತ್ರ

ದೇವಾಸ್: ‘ಮಧ್ಯಪ್ರದೇಶದ ದೇವಾಸ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 19 ವರ್ಷದ ಯುವಕನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಆರೋಪಿಯನ್ನು ಮುಸ್ತಾಫ ಮನ್ಸೂರಿ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬಾಲಕಿಗೆ ಇನ್‌ಸ್ಟ್ರಾಗ್ರಾಂ ಮೂಲಕ ಮುಸ್ತಾಫನ ಪರಿಚಯವಾಗಿತ್ತು.

‘ಈತ 14 ವರ್ಷದ ಬಾಲಕಿಯೊಂದಿಗೆ ಶನಿವಾರ ಪೂಜೆಗೆಂದು ದೇವಸ್ಥಾನಕ್ಕೆ ತೆರಳಿದ್ದ. ಬಳಿಕ ದೇವಸ್ಥಾನದ ಹಿಂಭಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬುದಾಗಿ ದೂರಿನಲ್ಲಿ ಹೇಳಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಅನಿಲ್‌ ಶರ್ಮಾ ಅವರು ಹೇಳಿದರು.

‘ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT