ಭೋಪಾಲ್: ಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಮೃತಪಟ್ಟಿದ್ದಾನೆ. 90 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕವೂ ಬಾಲಕನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಭಾನುವಾರ ನಸುಕಿನ 3 ಗಂಟೆ ಸುಮಾರಿಗೆ ಪ್ರಹ್ಲಾದ್‌ನನ್ನು ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಅವರು ತಿಳಿಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬಾಲಕನ ಸಾವಿಗೆ ಬೇಸರ ವ್ಯಕ್ತಪಡಿಸಿದ್ದು, ಬಾಲಕನ ಕುಟುಂಬಕ್ಕೆ ₹5 ಲಕ್ಷ ಸಹಾಯಧನ ಘೋಷಿಸಿದ್ದಾರೆ.

200 ಅಡಿ ಆಳದ ಕೊಳವೆ ಬಾವಿಯಲ್ಲಿ ಬಾಲಕ 60 ಅಡಿ ಅಂತರದಲ್ಲಿ ಸಿಲುಕಿದ್ದನು. ಆತನನ್ನು ಹೊರತೆಗೆಯುವ ಪ್ರಯತ್ನವನ್ನು ಮಾಡಲಾಗುತ್ತಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಾಲಕನ ಚಲನವಲನ ಕಾಣಿಸುತ್ತಿರಲಿಲ್ಲ ಎಂದು ಜಿಲ್ಲಾಧಿಕಾರಿ ಭಾರ್ಗವ್ ಅವರು ತಿಳಿಸಿದರು.

ನಿವಾರಿ ಜಿಲ್ಲೆಯ ಸೈತ್ಪುರ ಗ್ರಾಮದ ರೈತ ಹರಿಕೃಷ್ಣನ್ ಕುಶ್ವಾಹ ಅವರ ಮಗ ಅವರದ್ದೇ ಗದ್ದೆಯಲ್ಲಿ ಹೊಸದಾಗಿ ಹಾಕಲಾಗಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬುಧವಾರ ಬಿದ್ದಿದ್ದನು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.