ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಆರೋಗ್ಯಾಧಿಕಾರಿ ವಿರುದ್ಧ 50 ದಾದಿಯರಿಂದ ಲೈಂಗಿಕ ಕಿರುಕುಳ ಆರೋಪ

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ
Last Updated 15 ಜೂನ್ 2022, 15:31 IST
ಅಕ್ಷರ ಗಾತ್ರ

ಭೋಪಾಲ್: ಇಲ್ಲಿನ ಅತಿ ದೊಡ್ಡ ಸರ್ಕಾರಿ ವೈದ್ಯಕೀಯ ಸಂಸ್ಥೆ ಹಮಿದಿಯಾ ಆಸ್ಪತ್ರೆಯ ಆರೋಗ್ಯಾಧಿಕಾರಿಡಾ.ದೀಪಕ್‌ ಮರವಿ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಕನಿಷ್ಠ 50 ದಾದಿಯರು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಆರೋಗ್ಯ ಶಿಕ್ಷಣ ಸಚಿವ ವಿಶ್ವಾಸ್‌ ಸಾರಂಗ್‌, ‘ಡಾ.ದೀಪಕ್‌ ಮರವಿ ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಗೆ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಲು ಡಾ.ಮರವಿ ನಿರಾಕರಿಸಿದ್ದಾರೆ.

ಈ ನಡುವೆ ಮಧ್ಯ ಪ್ರದೇಶ ಮಾನವ ಹಕ್ಕುಗಳ ಆಯೋಗ 10 ದಿನಗಳ ಒಳಗಾಗಿಈ ಕುರಿತು ಪ್ರತಿಕ್ರಿಯೆ ನೀಡುವಂತೆ ಆರೋಗ್ಯ ಆಯುಕ್ತರಿಗೆ ನೋಟಿಸ್ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT