ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ಬಸ್‌ ಅಪಘಾತ: 4 ಮೃತದೇಹ ಪತ್ತೆ; ಮೃತರ ಸಂಖ್ಯೆ 51ಕ್ಕೆ ಏರಿಕೆ

Last Updated 17 ಫೆಬ್ರುವರಿ 2021, 9:49 IST
ಅಕ್ಷರ ಗಾತ್ರ

ರೇವಾ/ಸಿಧಿ: ‘ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದ್ದು, ಬುಧವಾರ 4ಮೃತದೇಹಗಳು ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.

ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಮಂಗಳವಾರ ಬಸ್‌ವೊಂದು ಸೇತುವೆಗೆ ಡಿಕ್ಕಿಯಾಗಿ ಕಾಲುವೆಗೆ ಉರುಳಿ ಬಿದ್ದಿತ್ತು. ಬಸ್‌ನಲ್ಲಿದ್ದವರ ಪೈಕಿ 20 ಮಹಿಳೆಯರು ಸೇರಿ 47 ಪ್ರಯಾಣಿಕರ ಶವಗಳು ಮಂಗಳವಾರ ಪತ್ತೆಯಾಗಿದ್ದವು. ಇದೀಗ ಮೃತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

‘ಮಂಗಳವಾರ ತಡರಾತ್ರಿ ಸ್ಥಗಿತಗೊಳಿಸಲಾದ ರಕ್ಷಣಾ ಕಾರ್ಯಾಚರಣೆಯು ಬುಧವಾರ ಬೆಳಿಗ್ಗೆ ಪುನರಾರಂಭಗೊಂಡಿದೆ. ಬನ್ಸಾಗರ್ ಅಣೆಕಟ್ಟು ಯೋಜನೆಯ ಭಾಗವಾಗಿರುವ ಕಾಲುವೆಯಲ್ಲಿ ಎರಡು ಮೃತದೇಹಗಳು ಸಿಕ್ಕಿವೆ’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜುಲತ ಪಟ್ಲೆ ಹೇಳಿದರು.

‘ಈವರೆಗೆ 51ಶವಗಳು ಪತ್ತೆಯಾಗಿವೆ. ಸಿಧಿ ಮತ್ತು ರೇವಾದ ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇನ್ನೂ 3 ಮಂದಿ ನಾಪತ್ತೆಯಾಗಿರುವ ಶಂಕೆಯಿದೆ’ ಎಂದು ಅವರು ತಿಳಿಸಿದರು.

‘ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಐದು ಜಿಲ್ಲೆಗಳ ಸ್ಥಳೀಯ ಅಧಿಕಾರಿಗಳು ಸೇರಿದಂತೆ ಒಟ್ಟು 600 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT