ಶನಿವಾರ, ಆಗಸ್ಟ್ 20, 2022
21 °C

‘1984ರ ಅನಿಲ ದುರಂತ ಸಂತ್ರಸ್ತರ ಸ್ಮರಣಾರ್ಥ ಸ್ಮಾರಕ ನಿರ್ಮಾಣ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: 1984ರ ಅನಿಲ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಗುರುವಾರ ತಿಳಿಸಿದರು.

ಅನಿಲ ದುರಂತದ 36ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಎಲ್ಲಾ ಧರ್ಮಗಳ ಸಭೆಯನ್ನು ಗುರುವಾರ ಆಯೋಜಿಸಲಾಗಿತ್ತು.

‌ಈ ವೇಳೆ ಮಾತನಾಡಿದ ಚೌಹಾಣ್‌,‘ ಅನಿಲ ದುರಂತದಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡುತ್ತಿದ್ದ ₹1000 ಪಿಂಚಣಿಯನ್ನು ಪುನರಾರಂಭಿಸಲಾಗುವುದು. ಅಲ್ಲದೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.

‘ವಿಶ್ವದ ಯಾವುದೇ ನಗರವು ಮತ್ತೊಂದು ಭೋಪಾಲ್ ಆಗಬಾರದು ಎಂಬುದನ್ನು ಈ ಸ್ಮಾರಕವು ನೆನಪಿಸಲಿದೆ.  ದೇವರು ನಮಗೆ ನೀಡಿರುವ ಈ ಜಗತ್ತನ್ನು ಮುಂದಿನ ಪೀಳಿಗೆಗಾಗಿ ಉಳಿಸಿಕೊಳ್ಳಬೇಕಾಗಿದೆ’ ಎಂದು ಅವರು ಹೇಳಿದರು.

2019ರಲ್ಲಿ ಕಾಂಗ್ರೆಸ್‌ ಸರ್ಕಾರವು ಅನಿಲ ದುರಂತದಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡುತ್ತಿದ್ದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು.

‘1984ರ ಡಿಸೆಂಬರ್ 3ರಂದು ಭೋಪಾಲದ ಯುನಿಯನ್ ಕಾರ್ಬೈಡ್ ಕಂಪನಿಯ ಕಾರ್ಖಾನೆಯಲ್ಲಿ  ಮಿಥೇಲ್‌ ಐಸೊಸೈನೇಟ್‌ ಅನಿಲ ಸೋರಿಕೆಯಾಯಿತು. ಇದರಿಂದಾಗಿ ಕಾರ್ಮಿಕರು ಮತ್ತು ಸ್ಥಳೀಯ ನಿವಾಸಿಗಳು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಹಾನಿಗೊಳಗಾಗಿದ್ದಾರೆ. ದುರಂತಕ್ಕೆ ಸಂಬಂಧಿಸಿ ಈ ತನಕ ಅಂದಾಜು 15 ಸಾವಿರ ಜನರು ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು