ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಉಪ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್‌ನ ಮಾಜಿ ಶಾಸಕಿ

Last Updated 3 ಅಕ್ಟೋಬರ್ 2021, 8:31 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ನ ಹಿರಿಯ ನಾಯಕಿ ಸುಲೋಚನಾ ರಾವತ್‌ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಅವರು ಉಪ ಚುನಾವಣೆ ನಡೆಯಲಿರುವ ಜೋಬತ್‌ ಕ್ಷೇತ್ರದ ಮಾಜಿ ಶಾಸಕರೂ ಆಗಿದ್ದಾರೆ.

ರಾವತ್ ಮತ್ತು ಅವರ ಪುತ್ರ ವಿಶಾಲ್ ರಾವತ್ ಶನಿವಾರ ತಡರಾತ್ರಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿಯ ಸಿದ್ಧಾಂತ ಮತ್ತು ಸರ್ಕಾರ ಕೈಗೊಳ್ಳುತ್ತಿರುವ ಬುಡಕಟ್ಟು ಜನರ ಕಲ್ಯಾಣ ಕಾರ್ಯಕ್ರಮಗಳಿಂದ ಪ್ರಭಾವಿತರಾಗಿ ಸುಲೋಚನಾ ಅವರು ಬಿಜೆಪಿ ಸೇರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ವಿ.ಡಿ.ಶರ್ಮಾ ತಿಳಿಸಿದ್ದಾರೆ.

ಚುನಾವಣಾ ಆಯೋಗವು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಿದೆ. ಇದೇ 30ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT