ಬುಧವಾರ, ಜುಲೈ 28, 2021
26 °C

ಉಪರಾಷ್ಟ್ರಪತಿಯನ್ನು ಭೇಟಿಯಾದ ಮಧ್ಯಪ್ರದೇಶ ರಾಜ್ಯಪಾಲ, ಕೇಂದ್ರ ಸಚಿವರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಛಗನ್‌ಭಾಯಿ ಪಟೇಲ್‌, ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಮನಸುಖ್‌ ಮಾಂಡವೀಯ ಮತ್ತು ಭೂಪೇಂದರ್ ಯಾದವ್ ಅವರು ಉಪ‍ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಶನಿವಾರ ಪ್ರತ್ಯೇಕವಾಗಿ ಭೇಟಿಯಾದರು.

ಈ ಭೇಟಿಯ ಫೋಟೊಗಳನ್ನು ಉಪರಾಷ್ಟ್ರಪತಿ ಅವರ ಸಚಿವಾಲಯ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಇತ್ತೀಚಿಗೆ ಧರ್ಮೇಂದ್ರ ಪ್ರಧಾನ್‌ ಅವರು ಶಿಕ್ಷಣ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಮಾಂಡವೀಯ ಅವರು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಸಾಯನಿಕ–ರಸಗೊಬ್ಬರ ಇಲಾಖೆಯ ಸಚಿವಾಗಿ ಅಧಿಕಾರ ಸ್ವೀಕರಿಸಿದ್ದರು.

ಭೂಪೇಂದರ್ ಯಾದವ್ ಅವರನ್ನು ಪರಿಸರ, ಅರಣ್ಯ, ಕಾರ್ಮಿಕ, ಉದ್ಯೋಗ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು