ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕನ ಅಮಾನತು

Last Updated 3 ಡಿಸೆಂಬರ್ 2022, 14:04 IST
ಅಕ್ಷರ ಗಾತ್ರ

ಬರ್ವಾನಿ(ಮಧ್ಯಪ್ರದೇಶ): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕೆ ಇಲ್ಲಿನ ಕನಸ್ಯಾ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಧೀನದ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್‌ ಕನ್ನೋಜೆ ಎಂಬುವವರನ್ನು ಅಮಾನತು ಮಾಡಲಾಗಿದ್ದು, ಅವರ ಅಮಾನತು ಆದೇಶದ ಪ್ರತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

‘ಸೇವಾ ನಡವಳಿಕೆ ನಿಯಮವನ್ನು ಉಲ್ಲಂಘಿಸಿ ರಾಜೇಶ್‌ ಅವರು ರಾಜಕೀಯ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಅವರು ಅದರಲ್ಲಿ ಪಾಲ್ಗೊಳ್ಳುವ ಸಲುವಾಗಿ ತುರ್ತು ಕಾರ್ಯದ ನಿಮಿತ್ತ ರಜೆ ಪಡೆದಿದ್ದರು ಮತ್ತು ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು’ ಎಂದು ಬುಡಕಟ್ಟು ವ್ಯವಹಾರಗಳ ಇಲಾಖೆಯ ಆಯುಕ್ತ ಎನ್‌.ಎಸ್‌. ರಘುವಂಶಿ ಹೇಳಿದ್ದಾರೆ.

‘ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಸರ್ಕಾರವು ನೌಕರರನ್ನು ಆರ್‌ಎಸ್‌ಎಸ್‌ ಶಾಖೆಗಳಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುತ್ತದೆ. ಆದರೆ ರಾಜಕೀಯೇತರ ರ‍್ಯಾಲಿಯ ವೇಳೆ ರಾಹುಲ್‌ ಗಾಂಧಿ ಅವರಿಗೆ ಬಿಲ್ಲು ಮತ್ತು ಬಾಣವನ್ನು ಉಡುಗೊರೆಯಾಗಿ ನೀಡಿದ್ದಕ್ಕೆ ಬುಡಕಟ್ಟು ವ್ಯಕ್ತಿಯೊಬ್ಬರನ್ನು ಅಮಾನತು ಮಾಡಿದೆ’ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ. ಮಿಶ್ರಾ ಟ್ವಿಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT