ಸೋಮವಾರ, ಸೆಪ್ಟೆಂಬರ್ 26, 2022
24 °C

ಬಿಜೆಪಿ ಶಾಸಕನ ವಿರುದ್ಧ ತನಿಖೆ ನಡೆಸಿ: ಲೋಕಾಯುಕ್ತರಿಗೆ ಹೈಕೋರ್ಟ್‌ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಬಲ್‌ಪುರ (ಮಧ್ಯ ಪ್ರದೇಶ): ಬಿಜೆಪಿ ಶಾಸಕ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಸಮಿತಿಯ ಅಧ್ಯಕ್ಷ ಗೌರಿ ಶಂಕರ್‌ ಬಿಸೆನ್‌ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಮಧ್ಯ ಪ್ರದೇಶ ಹೈಕೋರ್ಟ್‌ ಬುಧವಾರ ಮತ್ತೊಮ್ಮೆ ನಿರ್ದೇಶನ ನೀಡಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಬಿಸೇನ್‌ ವಿರುದ್ಧ ಇದೆ.

ಬಿಸೆನ್‌ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಲು ಕೋರಿ ಶಾಸಕ ಕಿಶೋರ್‌ ಸಮರೀತೆ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶ ರವಿ ಮಾಲಿಮತ್‌ ಮತ್ತು ನ್ಯಾಯಧೀಶ ವಿಶಾಲ್‌ ಮಿಶ್ರಾ ಅವರು ತಿರಸ್ಕರಿಸಿದರು.

226 ವಿಧಿ ಅನ್ವಯ ಪಿಐಎಲ್‌ಅನ್ನು ಸಲ್ಲಿಸಲಾಗಿದೆ. ಆದ್ದರಿಂದ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಆರೋಪಗಳ ವಿಚಾರಣೆ ನಡೆಸಲು ನಮಗೆ ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಈ ಹಿಂದೆಯೂ ಹೈಕೋರ್ಟ್‌ ಇದೇ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಬಿಸೇನ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಮತ್ತೊಮ್ಮೆ ಪ್ರಕರಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಮಧ್ಯಪ್ರದೇಶ ಹೈಕೋರ್ಟ್‌ಗೆ ಸೂಚಿಸಿತ್ತು. ಬುಧವಾರ ಹೈಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಿ, ಈ ನಿರ್ದೇಶನ ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು