ಶುಕ್ರವಾರ, ಜುಲೈ 30, 2021
23 °C

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಉಜ್ಜಯಿನಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

‘ಈ ಹಿನ್ನೆಲೆಯಲ್ಲಿ ಉಜ್ಜಯಿನಿ ಜಿಲ್ಲೆಯ ಅಕ್ಯ ಜಗಿರ್‌ ವಿಲೇಜ್‌ನ ನಿವಾಸಿ ಗೋವರ್ಧನ್‌ ನಗರ್‌ ವಿರುದ್ಧ ಬಿಜೆಪಿ ನಾಯಕರೊಬ್ಬರು ಶನಿವಾರ ದೂರು ದಾಖಲಿಸಿದ್ದರು’ ಎಂದು ಕಚ್ರೋಡ್‌/ ಪೊಲೀಸ್ ಠಾಣೆಯ ಉಸ್ತುವಾರಿ ರಾಮ್‌ಕಿಶೋರ್ ಸಿಂಗಾವತ್ ತಿಳಿಸಿದರು.

‘ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಮತ್ತು ಸ್ಮೃತಿ ಇರಾನಿ ಅವರ ಬಗ್ಗೆ ಆರೋಪಿ ಆಕ್ಷೇಪಾರ್ಹ  ಹೇಳಿಕೆಗಳನ್ನು ನೀಡಿದ್ದಾನೆ. ಅದರೊಂದಿಗೆ ಕೆಲವೊಂದು ಫೋಟೊಗಳನ್ನು ಹಂಚಿಕೊಂಡಿದ್ಧಾನೆ’ ಎಂದು ಕಚ್ರೋಡ್‌ನ ಬಿಜೆಪಿ ಘಟಕದ ಅಧ್ಯಕ್ಷ ಚೇತನ್‌ ಶರ್ಮಾ ಅವರು ದೂರಿನಲ್ಲಿ ಹೇಳಿದ್ದರು.

‘ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಆರೋಪಿಗೆ ಜಾಮೀನು ಸಿಕ್ಕಿದೆ. ತನಿಖೆ ಮುಂದುವರಿದಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು