ಭಾನುವಾರ, ಮೇ 29, 2022
31 °C

ಪ್ರಧಾನಿ ನರೇಂದ್ರ ಮೋದಿ ರಾಮ- ಕೃಷ್ಣನ ಅವತಾರ: ಮಧ್ಯ ಪ್ರದೇಶ ಸಚಿವ ಕಮಲ್ ಪಟೇಲ್

ಪಿಟಿಐ Updated:

ಅಕ್ಷರ ಗಾತ್ರ : | |

Prime Minister Narendra Modi. Credit: PTI Photo

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಮತ್ತು ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ.

ಕಾಂಗ್ರೆಸ್ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು ತೊಲಗಿಸಲು ಪ್ರಧಾನಿ ಮೋದಿ ಅವತಾರವೆತ್ತಿ ಬಂದಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.

ಹರ್ದಾದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುತ್ತಿದೆ. ಭ್ರಷ್ಟಾಚಾರ ಕೊನೆಯಾಗುತ್ತಿದೆ. ಇಷ್ಟೊಂದು ಜನರ ಕಲ್ಯಾಣ ಓರ್ವ ಜನಸಾಮಾನ್ಯನಿಂದ ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರು ಅವತಾರ ತಾಳಿ ಬಂದಿದ್ದಾರೆ ಎಂದು ಹೇಳಿದ್ದಾರೆ.

ಭೂಮಿಯಲ್ಲಿ ಅನ್ಯಾಯ ಉಂಟಾದಾಗ, ರಾಮ ದೇವರು ಅವತಾರ ತಾಳಿ ಬಂದಿದ್ದರು. ರಾಕ್ಷಸ ಸಂಹಾರ ಮಾಡಿ ರಾಮರಾಜ್ಯ ಸ್ಥಾಪಿಸಿದ್ದರು. ಅದೇ ಮಾದರಿಯಲ್ಲಿ ಈಗ ಪ್ರಧಾನಿ ಮೋದಿ ಜನ್ಮತಾಳಿದ್ದು, ದೇಶದಲ್ಲಿ ನಡೆಯುತ್ತಿರುವ ಎಲ್ಲ ಭ್ರಷ್ಟಾಚಾರ, ಅನಾಚಾರವನ್ನು ಕೊನೆಗೊಳಿಸಲಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು