ಮಂಗಳವಾರ, ಆಗಸ್ಟ್ 9, 2022
23 °C

ತೀಸ್ತಾ ಸೆಟಲ್‌ವಾಡ್‌ರಿಂದ ಪದ್ಮಶ್ರೀ ಪ್ರಶಸ್ತಿ ಹಿಂಪಡೆಯಬೇಕು: ಮಧ್ಯ ಪ್ರದೇಶ ಸಚಿವ

ಪಿಟಿಐ Updated:

ಅಕ್ಷರ ಗಾತ್ರ : | |

ಭೋಪಾಲ್‌: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಆಗ್ರಹಿಸಿದ್ದಾರೆ.

'ತೀಸ್ತಾ ಜಾವೇದ್‌ ಸೆಟಲ್‌ವಾಡ್‌ ಅವರು ಅವಾರ್ಡ್‌ ವಾಪ್ಸಿ ಗುಂಪಿನ ಸದಸ್ಯೆಯಾಗಿದ್ದಾರೆ. ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು' ಎಂದು ರಾಜ್ಯ ಸರ್ಕಾರದ ವಕ್ತಾರರೂ ಆಗಿರುವ ನರೋತ್ತಮ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ:  ವಂಚನೆ, ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಬಂಧನ: ಅಧಿಕಾರಿಗಳು

2002ರ ಗುಜರಾತ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಅವರನ್ನು ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್‌)  ಮುಂಬೈನಲ್ಲಿ ಬಂಧಿಸಿತ್ತು. ಬಳಿಕ ನಕಲಿ ಸಹಿ, ಕ್ರಿಮಿನಲ್ ಪಿತೂರಿ ಮತ್ತಿತರ ಪ್ರಕರಣದಲ್ಲಿ ಭಾನುವಾರ ಅಹಮದಾಬಾದ್‌ ಕ್ರೈಂ ಬ್ರಾಂಚ್‌ಗೆ ಅವರನ್ನು ಹಸ್ತಾಂತರಿಸಿದೆ.

ತೀಸ್ತಾ ಅವರಿಗೆ 2007ರಲ್ಲಿ ಪ್ರತಿಷ್ಠಿತ ನಾಗರಿಕ ಪ್ರಶಸ್ತಿ ಪದ್ಮಶ್ರೀಯನ್ನು ಪುರಸ್ಕರಿಸಲಾಗಿದೆ.

ತೀಸ್ತಾ ಸೆಟಲ್‌ವಾಡ್‌ ಅವರನ್ನು ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್‌) ವಶಕ್ಕೆ ಪಡೆದುಕೊಂಡಿರುವುದನ್ನು ಖಂಡಿಸಿ, ರಾಜ್ಯ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ. 

ಇದನ್ನೂ ಓದಿ: 

ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್  ಅವರು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ವಶದಲ್ಲಿ ಇದ್ದಾರೆ.

2002ರ ಗೋಧ್ರಾ ನಂತರದ ದಂಗೆ ಪ್ರಕರಣಗಳಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಎಸ್‌ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿತ್ತು. ಕೋಮುಗಲಭೆಗಳ ಬಗ್ಗೆ ಗುಜರಾತ್ ಸರ್ಕಾರದ ವೈಫಲ್ಯವನ್ನು ಪ್ರಶ್ನಿಸಿ ಆಧಾರರಹಿತ ತಪ್ಪು ಆರೋಪಗಳನ್ನು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಸುಪ್ರೀಂ ಕೋರ್ಟ್ ಹೇಳಿತ್ತು. ಇದಾದ ಬಳಿಕ ಸೆಟಲ್‌ವಾಡ್‌, ಶ್ರೀಕುಮಾರ್ ಮತ್ತು ಭಟ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು