ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಗಿ ಆರು ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿದರು!

Last Updated 7 ಸೆಪ್ಟೆಂಬರ್ 2021, 13:11 IST
ಅಕ್ಷರ ಗಾತ್ರ

ಭೋಪಾಲ್; ಮಳೆಗಾಗಿ ಪ್ರಾರ್ಥಿಸಿ ಆರು ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ (NCPCR) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಸಮಗ್ರ ವರದಿ ನೀಡುವಂತೆ ದಾಮೋಹ್ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದೆ.

'ಇತ್ತೀಚೆಗೆ ದಾಮೋಹ್ ಜಿಲ್ಲೆಯ ಜಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಎಂಬಲ್ಲಿ ಸಾರ್ವಜನಿಕವಾಗಿ ಆರು ಅಪ್ರಾಪ್ತ ಬಾಲಕಿಯರನ್ನು ಮೂಢನಂಬಿಕೆಯಿಂದ ಬೆತ್ತಲೆ ಮೆರವಣಿಗೆ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು ತಪ್ಪಿತಸ್ಥರನ್ನು ಶೀಘ್ರ ಬಂಧಿಸುತ್ತೇವೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಆರ್ ತನ್ವೀರ್ ತಿಳಿಸಿದ್ದಾರೆ.

'ಘಟನೆಯಲ್ಲಿ ಬಾಲಕಿಯರನ್ನು ಬೆತ್ತಲೆಯಾಗಿಸಿ ಅವರಿಗೆ ಕಟ್ಟಿಗೆ ನೊಗ ಹೊರಿಸಿ ಹಾಗೂ ಕೊರಳಲ್ಲಿ ಕಪ್ಪೆ ಕಟ್ಟಿಸಿ ಮೆರವಣಿಗೆ ಮಾಡಲಾಗಿದೆ. ಮಳೆಗಾಗಿ ವರುಣ ದೇವರ ಪ್ರಾರ್ಥನೆ ಮಾಡಲು ಈ ರೀತಿ ಮಾಡಲಾಗಿದೆ' ಎಂದು ಎಸ್ ಪಿ ತಿಳಿಸಿದ್ದಾರೆ.

'ಈ ರೀತಿಯ ಘಟನೆಗಳು ನಡೆಯದಂತೆ ನಾವು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದು ಎಸ್ ಪಿ ಹೇಳಿದ್ದಾರೆ. ಇನ್ನು, ಈ ಘಟನೆಗೆ ಸಂಬಂಧಿಸಿದಂತೆ ಎರಡು ವಿಡಿಯೊ ಕ್ಲಿಪ್ ಹರಿದಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT