ಸೋಮವಾರ, ಏಪ್ರಿಲ್ 12, 2021
31 °C

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಸ್ವಾಮಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್‌ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಶುಕ್ರವಾರ ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹಾಗೂ ಇತರರ ವಿರುದ್ಧದ ಪ್ರಕರಣದಲ್ಲಿ ಕಾನೂನು ಕ್ರಮ ಜರುಗಿಸಲು ಸಾಕ್ಷ್ಯಗಳ ವಿಚಾರಣೆ ಆರಂಭಿಸಬೇಕು ಎಂಬ ಸ್ವಾಮಿ ಅವರು ಮಾಡಿದ ಮನವಿಯನ್ನು ವಿಚಾರಣಾ ನ್ಯಾಯಾಲಯವು ತಿರಸ್ಕರಿಸಿತ್ತು.

ಸ್ವಾಮಿ ಅವರ ಅರ್ಜಿಯು ಅಪರಾಧ ದಂಡಸಂಹಿತೆಯ ಸೆಕ್ಷನ್‌ 244ರ ಅಡಿ ಹೇಳಿದಂತೆ, ಈ ಪ್ರಕರಣದಲ್ಲಿ ಎಲ್ಲಾ ವಿವರವಾದ ಪರಿಶೀಲನೆಗಳು ಮುಗಿದ ಬಳಿಕ ಸಾಕ್ಷ್ಯಗಳನ್ನು ಪರಿಗಣಿಸಲಾಗುವುದು ಎಂದು ಫೆಬ್ರುವರಿ 11ರಂದು ವಿಚಾರಣಾ ನ್ಯಾಯಾಲಯವು ಹೇಳಿತ್ತು. ಈ ಆದೇಶದಿಂದ ಅಸಮಾಧಾನಗೊಂಡಿರುವ ಸ್ವಾಮಿ, ದೆಹಲಿ ಹೈಕೋರ್ಟ್‌ನಲ್ಲಿ ಅದನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು