ಸೋಮವಾರ, ಜನವರಿ 24, 2022
23 °C

ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ, ಬಾಲಕಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅನುಪ್ಪುರ್: ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಗೆ ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದೆ. ಬಾಲಕಿಯು ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ರಾಜೇಂದ್ರನಗರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕೃತ್ಯ ನಡೆದಿದೆ. ಆರೋಪಿ,
22 ವರ್ಷದ ಯಶವಂತ್ ಮರವಿ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ಸುಳಿವು ನೀಡಿದವರಿಗೆ ₹30 ಸಾವಿರ ಬಹುಮಾನ ಘೋಷಿಸಲಾಗಿದೆ ಎಂದು ಹೆಚ್ಚುವರಿ ಡಿಜಿ ಸಾಗರ್ ತಿಳಿಸಿದ್ದಾರೆ. 

ಅಧಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಸಾವಿಗೂ ಮೊದಲು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ರಕ್ತಸ್ರಾವದಿಂದ ಸತ್ತಿರುವುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿದೆ. ಆರೋಪಿಯ ಪತ್ತೆ, ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು