ಬುಧವಾರ, ಆಗಸ್ಟ್ 17, 2022
23 °C

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ತೃತೀಯ ಲಿಂಗಿ ಬಂಧನ, ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್: ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ತೃತೀಯ ಲಿಂಗಿಯೊಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ನಾನು ವಿಶ್ವಾಸ್‌ ಕಿನ್ನರ್‌ ಎಂಬವರನ್ನು ಶನಿವಾರ ಸಂಜೆ ಬಂಧಿಸಲಾಗಿದ್ದು, ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್ ಡಿ.ಪಿ ಸಿಂಗ್‌ ಅವರು ವರದಿಗಾರರಿಗೆ ತಿಳಿಸಿದರು.

‘ಮಸೀದಿಯ ಆವರಣದಲ್ಲಿ ನಾನು ವಿಶ್ವಾಸ್‌ ಕಿನ್ನರ್‌ ಅವರು ನೃತ್ಯ ಮಾಡಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದು ವೈರಲ್‌ ಆಗಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ’ ಎಂದು ಮೋತಿ ಮಸೀದಿಯು ದೂರು ದಾಖಲಿಸಿದೆ.

‘ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ನಾನು ವಿಶ್ವಾಸ ಅವರಿಗೆ ಜಾಮೀನು ಸಿಕ್ಕಿದೆ’ ಎಂದು ಪೊಲೀಸರು ತಿಳಿಸಿದರು.

ನಾನು ವಿಶ್ವಾಸ್‌ ಕಿನ್ನಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು