ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ: ಐವರ ಬಂಧನ

Last Updated 4 ಜುಲೈ 2022, 14:09 IST
ಅಕ್ಷರ ಗಾತ್ರ

ಗುನಾ(ಪಿಟಿಐ): ಮಧ್ಯಪ್ರದೇಶದ ಗುನಾ ಜಿಲ್ಲೆಯ ಧನೋರಿಯಾ ಗ್ರಾಮದಲ್ಲಿ ಭೂ ವಿವಾದದಿಂದ ಮಹಿಳೆಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಟ್ಟ ಗಾಯಗಳಿಂದ ಬಳಲುತ್ತಿರುವ ರಾಮ್‌ಪ್ಯಾರಿ ಬಾಯಿ (45) ಅವರ ಸ್ಥಿತಿ ಗಂಭೀರವಾಗಿದೆ ಎಂದೂ ಹೇಳಿದ್ದಾರೆ.

‘ಹೊಲಕ್ಕೆ ಹೋದಾಗ ಪತ್ನಿ ಸುಟ್ಟ ಗಾಯಗಳಿಂದ ನರಳುತ್ತಿದ್ದಳು. ವಿಚಾರಿಸಿದಾಗ ಮೂವರು ಬೆಂಕಿ ಹಚ್ಚಿರುವುದಾಗಿ ತಿಳಿಸಿದ್ದಾಳೆ’ ಎಂದು ಮಹಿಳೆಯ ಪತಿ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಆರೋಪಿಗಳೇ ಇದನ್ನು ಚಿತ್ರೀಕರಿಸಿದ್ದರು ಎನ್ನಲಾಗಿದೆ.

‘ಘೋರ ಕೃತ್ಯ’:

ಮಹಿಳೆಗೆ ಬೆಂಕಿ ಹಚ್ಚಿರುವುದು ಘೋರ ಮತ್ತು ನಾಚಿಕೆಗೇಡಿನ ಸಂಗತಿ ಎಂದಿರುವ ರಾಷ್ಟ್ರೀಯ ಮಹಿಳಾ ಆಯೋಗ,ಎಲ್ಲಾ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT