ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ಜನಾಂಗದ ಇಬ್ಬರ ಹತ್ಯೆ: ಎಸ್‌ಪಿ ವರ್ಗಾವಣೆ

Last Updated 14 ಮೇ 2022, 15:35 IST
ಅಕ್ಷರ ಗಾತ್ರ

ಭೋಪಾಲ್(ಪಿಟಿಐ): ಮಧ್ಯಪ್ರದೇಶದ ಸಿವನಿಯಲ್ಲಿ ಗೋಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿಯನ್ನು (ಎಸ್‌ಪಿ) ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ಮೇರೆಗೆ, 'ಸಿವನಿಯ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರ್ ಪ್ರತೀಕ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಹತ್ಯೆ ಮಾಡಿದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗುತ್ತದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಜೊತೆಗೆ ಅವರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಲಾಗುತ್ತದೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಬುಡಕಟ್ಟು ಸಮುದಾಯ ಮತ್ತು ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದು ಮಧ್ಯಪ್ರದೇಶ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್‌ನಾಥ್ ಹೇಳಿದ್ದಾರೆ.

ಮೇ 3ರಂದು ಸಾಗರ ಗ್ರಾಮದ ಸಂಪತ್ ಭಟ್ಟಿ ಮತ್ತು ಸಿಮಾರಿಯಾ ಗ್ರಾಮದ ಧನ್ಸಾ ಇನ್ವತಿ ಅವರನ್ನು ಬಜರಂಗದಳದವರು ಎನ್ನಲಾದ 15-20 ಮಂದಿಯ ಗುಂಪು ಮನಸೋಇಚ್ಛೆ ಥಳಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT