ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12ರ ಬಾಲಕಿಯ ಮೇಲೆ ಅತ್ಯಾಚಾರ; ಸಂಬಂಧಿಗಳಿಂದ ವಾಹನಗಳಿಗೆ ಬೆಂಕಿ

Last Updated 6 ಜನವರಿ 2023, 18:17 IST
ಅಕ್ಷರ ಗಾತ್ರ

ಬೆತುಲ್‌ (ಮಧ್ಯಪ್ರದೇಶ): ಇಲ್ಲಿಯ 12 ವರ್ಷದ ಬಾಲಕಿಯ ಮೇಲೆ ಹಿಟ್ಟಿನ ಗಿರಣಿಯ ಮಾಲೀಕನೋರ್ವ ಅತ್ಯಾಚಾರವೆಸಗಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಆರೋಪಿಯ ಕಾರು, ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಇಲ್ಲಿಯ ಆಜಾದ್‌ ವಾರ್ಡ್ ಪ್ರದೇಶದಲ್ಲಿ ಸೋಮವಾರ ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಾಲಕಿ ಮನೆಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರಿಂದ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳೀಯ ಸಂಸ್ಥೆ ಸದಸ್ಯನಾಗಿದ್ದ 58 ವರ್ಷದ ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನಗಳಿಗೆ ಬೆಂಕಿ ಹಚ್ಚಿದ್ದ ಜಾಗಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 376 ಹಾಗೂ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ಪ್ರಕರಣದ ಬಗ್ಗೆ ಮಧ್ಯ ಪ್ರದೇಶ ಗೃಹ ಮಂತ್ರಿ ನರೋತ್ತಮ ಮಿಶ್ರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸದ್ಯ ಭೋಪಾಲ್‌ ಪರಿಸ್ಥಿತಿ ಹತೋಟಿಯಲ್ಲಿದೆ. ಆರೋಪಿಗಳನ್ನು ಬಂಧಿಸಲಾಗುವುದು, ಜತೆಗೆ ಹಿಂಸಾಚಾರದಲ್ಲಿ ತೊಡಗಿದ್ದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT