ನರಸಿಂಗಪುರ: ಮದ್ಯ ವ್ಯಸನಿ ಗಂಡನ ಕಿರುಕುಳದಿಂದ ತಪ್ಪಿಸಿಕೊಳ್ಳಲು 38 ವರ್ಷದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಹಿಳೆ ಮತ್ತು 19 ವರ್ಷದ ಮಗ ಹಾಗೂ 16 ವರ್ಷದ ಬಾಲಕಿ ಹಿಂಸೆಯಿಂದ ಬೇಸತ್ತು ಗಡರ್‌ವಾರಾ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆಗೆ ರೈಲ್ವೆ ಹಳಿ ಮೇಲೆ ಮೃತದೇಹಗಳು ಇರುವ ಮಾಹಿತಿ ಸಿಕ್ಕಿದೆ ಎಂದು ಸ್ಥಳೀಯ ಉಪ ವಿಭಾಗದ ಪೊಲೀಸ್ ಅಧಿಕಾರಿ ಶಶಿ ಪಠಾಕ್ ತಿಳಿಸಿದ್ದಾರೆ.
ಯುವಕನ ಜೇಬಿನಲ್ಲಿ ಪತ್ರ ಸಿಕ್ಕಿದ್ದು, ಅದರಲ್ಲಿ ನಮ್ಮ ತಂದೆ ಕುಡಿದು ತೊಂದರೆ ನೀಡುವರು. ಇದರಿಂದ ಬೇಸತ್ತು ಮೂರು ಮಂದಿ ಪ್ರಾಣ ತೆಗೆದುಕೊಳ್ಳುತ್ತಿದ್ದೇವೆ ಎಂದು ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕನ ತಂದೆಯನ್ನು ಬಂಧಿಸಿದ್ದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಪಠಾಕ್ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.