ಶುಕ್ರವಾರ, ಆಗಸ್ಟ್ 19, 2022
21 °C
ರಾಜ್ಯಸಭೆಯಲ್ಲಿ ಸಭಾಪತಿ ಎಂ.ವೆಂಕಯ್ಯ ನಾಯ್ಡು

ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ: ವೆಂಕಯ್ಯ ನಾಯ್ಡು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕ್ರಿಮಿನಲ್ ಪ್ರಕರಣಗಳಲ್ಲಿ ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ’ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ರಾಜ್ಯಸಭೆಯಲ್ಲಿ ಶುಕ್ರವಾರ ಹೇಳಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಸಂಸತ್ ಅಧಿವೇಶನದ ಮಧ್ಯೆಯೇ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿದ್ದನ್ನು ಖಂಡಿಸಿ ವಿರೋಧ ಪಕ್ಷಗಳ ಸದಸ್ಯರು
ಶುಕ್ರವಾರ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ವೆಂಕಯ್ಯ ನಾಯ್ಡು ಅವರು ಹೀಗೆ ಹೇಳಿದ್ದಾರೆ.

‘ಸಂಸದರಿಗೆ ಬಂಧನದಿಂದ ರಕ್ಷಣೆ ಇದೆ ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ, ನಿಜಕ್ಕೂ ಹಾಗಿಲ್ಲ. ಸಿವಿಲ್‌
ಪ್ರಕರಣಗಳಲ್ಲಾದರೆ, ಅಧಿವೇಶನದ ಅವಧಿ ಮತ್ತು ಆನಂತರದ 40 ದಿನದ ಒಳಗೆ ಸಂಸದರನ್ನು ಬಂಧಿಸುವಂತಿಲ್ಲ. ಆದರೆ ಕ್ರಿಮಿನಲ್ ಪ್ರಕರಣಗಳಲ್ಲಿ ಅಂತಹ ರಕ್ಷಣೆ ಇಲ್ಲ’ ಎಂದು ಅವರು ಹೇಳಿದ್ದಾರೆ. 

ಯಾವ ಸದಸ್ಯರೂ ಸದನದಲ್ಲಿ ಕಲಾಪ ನಡೆಯುತ್ತಿದೆ ಎಂಬ ನೆಪ ಒಡ್ಡಿ, ತನಿಖಾ ಸಂಸ್ಥೆಗಳ ಎದುರು ವಿಚಾರಣೆಗೆ ಹಾಜರಾಗುವುದನ್ನು ತಪ್ಪಿಸಬಾರದು ಎಂದು ಅವರು ಹೇಳಿದ್ದಾರೆ.

ಕಲಾಪ ಮುಂದೂಡಿಕೆ: ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸಂಸದರು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. 

ಬೆಲೆ ಏರಿಕೆ ಕುರಿತು ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಲೋಕಸಭೆಯಲ್ಲಿ ಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು