ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಯುಎನ್‌ಡಬ್ಯ್ಲುಟಿಒ ಪ್ರಶಸ್ತಿಗೆ ಮಧ್ಯಪ್ರದೇಶ ಗ್ರಾಮದ ಹೆಸರು ನಾಮನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಲಾಡಪುರ ಖಾಸ್‌ ಗ್ರಾಮವನ್ನು ‘ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ’ ವಿಭಾಗದಲ್ಲಿ ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (ಯುಎನ್‌ಡಬ್ಯ್ಲುಟಿಒ) ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

‘ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಪ್ರವಾಸಿ ಪಟ್ಣಣ ಓರ್ಚಾದ ಸಮೀಪವಿರುವ ಲಾಡಪುರ ಖಾಸ್‌ ಗ್ರಾಮವನ್ನು ವಿಶ್ವ ಪ್ರವಾಸೋದ್ಯಮ ಸಂಸ್ಥೆ ಪ್ರಶಸ್ತಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ವಿಭಾಗದಲ್ಲಿ ನಾಮನಿರ್ದೇಶನ ಮಾಡಿದೆ. ಇದರೊಂದಿಗೆ ಮೇಘಾಲಯ ಮತ್ತು ತೆಲಂಗಾಣದ ತಲಾ ಒಂದು ಗ್ರಾಮವನ್ನೂ ನಾಮನಿರ್ದೇಶನ ಮಾಡಲಾಗಿದೆ’ ಎಂದು ಮಧ್ಯಪ್ರದೇಶ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿಯೋ ಶೇಖರ್ ಶುಕ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಗ್ರಾಮ ಪ್ರವಾಸೋದ್ಯಮದ ಪರಿಕಲ್ಪನೆಗೆ ಆಕಾರ ನೀಡುವ ಉದ್ದೇಶದಿಂದ ಲಾಡಪುರ ಖಾಸ್‌ ಸೇರಿದಂತೆ ಮಧ್ಯಪ್ರದೇಶದ ವಿವಿಧ ಹಳ್ಳಿಗಳಲ್ಲಿ ಗ್ರಾಮೀಣ ಪ್ರವಾಸೋದ್ಯಮ ಯೋಜನೆ ಆರಂಭಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಗ್ರಾಮೀಣ ಪ್ರವಾಸೋದ್ಯಮ ದೃಷ್ಟಿಯಿಂದ 100 ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗುವುದು. ಪ್ರವಾಸಿ ತಾಣಗಳಾದ ಓರ್ಚಾ, ಖಜುರಾಹೋ, ಮಂಡು, ಸಾಂಚಿ, ಪಂಚ್‌ಮಡಿ. ತಮಿಯಾ, ಪನ್ನಾ ರಾಷ್ಟ್ರೀಯ ಉದ್ಯಾನ ಸೇರಿದಂತೆ ಇತರ ಸುತ್ತಮುತ್ತಲ ಸ್ಥಳಗಳಲ್ಲಿ ಅಭಿವೃಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

 ಲಾಡಪುರ ಖಾಸ್‌ ಅನ್ನು ‘ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ’ ವಿಭಾಗಕ್ಕೆ ನಾಮನಿರ್ದೇಶನ ಮಾಡಿರುವುದಕ್ಕೆ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌  ಚೌಹಾಣ್‌ ಅವರು ಪ್ರವಾಸೋದ್ಯಮ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು