ಮಂಗಳವಾರ, ಆಗಸ್ಟ್ 9, 2022
23 °C

ರಕ್ಷಾ ರಾಮಯ್ಯಗೆ ಆಂಧ್ರಪ್ರದೇಶದ ಕಾಂಗ್ರೆಸ್ ಉಸ್ತುವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಆಂಧ್ರ ಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ. 

ರಾಷ್ಟ್ರೀಯ ಯುವ ಕಾಂಗ್ರೆಸ್ ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದು, ರಕ್ಷಾ ರಾಮಯ್ಯ ಅವರಿಗೆ ಪಕ್ಕದ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ. 

'ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ' ಎಂದು ರಕ್ಷಾ ರಾಮಯ್ಯ ಹೇಳಿದ್ದಾರೆ.

ನೂತನ ಜವಾಬ್ದಾರಿ ವಹಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವಾರು ಅವರಿಗೆ ರಕ್ಷಾ ರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂದರ್ಶನ | ತಂದೆಯ ನಿರ್ದೇಶನ, ತೀರ್ಮಾನದಂತೆ ನಾನು ಮುಂದುವರಿಯುವೆ -ರಕ್ಷಾ ರಾಮಯ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು