ಶುಕ್ರವಾರ, ಅಕ್ಟೋಬರ್ 2, 2020
21 °C

ಪ್ರಣವ್ ಅಗಲಿಕೆಗೆ ಬೈಡನ್ ಸಂತಾಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಭಾರತದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಜಾಗತಿಕ ಸವಾಲುಗಳನ್ನು ಭಾರತ ಮತ್ತು ಅಮೆರಿಕ ಒಟ್ಟಾಗಿ ಎದುರಿಸುವುದರ ಪ್ರಾಮುಖ್ಯತೆಯನ್ನು ಮನಗಂಡಿದ್ದರು ಎಂದು ಅಮೆರಿಕ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಹೇಳಿದ್ದಾರೆ. ಮುಖರ್ಜಿ ಅವರ ನಿಧನಕ್ಕೂ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಣವ್ ಅವರು ಧರ್ಮನಿಷ್ಠ ಸಾರ್ವಜನಿಕ ಸೇವಕ. ಜಾಗತಿಕ ಸವಾಲುಗಳನ್ನು ಉಭಯ ರಾಷ್ಟ್ರಗಳು ಒಟ್ಟಾಗಿ ಎದುರಿಸುವ ಅಗತ್ಯವನ್ನು ತಿಳಿದಿದ್ದರು. ಅವರ ಅಗಲಿಕೆ ನೋವಿನ ಸಂಗತಿ ಎಂದು ಬೈಡನ್ ಪ್ರತಿಕ್ರಿಯಿಸಿದರು.

ಅಲ್ಲದೆ, ಅಮೆರಿಕದ ಇತರೆ ಪ್ರಮುಖ ನಾಯಕರು ಹಾಗೂ ಸಂಘಟನೆಗಳು ಕೂಡಾ ಪ್ರಣವ್ ಮುಖರ್ಜಿ ಅವರ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದು, ಭಾರತದ ಮುತ್ಸದ್ಧಿ ರಾಜಕಾರಣಿಯಾಗಿ ಅವರು ಇತಿಹಾಸದ ಪುಟ ಸೇರಲಿದ್ದಾರೆ ಎಂದು ಪ್ರತಿಕ್ರಿಯಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು