ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಣವ್‌ ಮುಖರ್ಜಿ ಆರೋಗ್ಯದಲ್ಲಿ ಸುಧಾರಣೆ ಇಲ್ಲ’

Last Updated 21 ಆಗಸ್ಟ್ 2020, 7:54 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ.

ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಚಿಕಿತ್ಸೆ ವೇಳೆ ವೈದ್ಯರು ಪ್ರಮುಖ ಮಾನದಂಡಗಳನ್ನು ಪಾಲಿಸುತ್ತಿದ್ದಾರೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ತಿಂಗಳ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆ್ಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT