ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಲಾಯಂ ಸಿಂಗ್ ಯಾದವ್‌ರನ್ನು ಕೊಂಡಾಡಿದ ಸಿಎಂ ಯೋಗಿ ಆದಿತ್ಯನಾಥ್

Last Updated 10 ಅಕ್ಟೋಬರ್ 2022, 10:27 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನೇತಾರರಾಗಿದ್ದ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಉತ್ತರಪ್ರದೇಶ ರಾಜ್ಯದಾದ್ಯಂತ ಮೂರು ದಿನ ಶೋಕಾಚರಣೆ ಘೋಷಿಸಿರುವ ಸಿಎಂ ಯೋಗಿ ಅವರು, ಮುಲಾಯಂ ಅವರು ಸಮಾಜವಾದದ ಮೂಲಸ್ತಂಭವಾಗಿದ್ದರು. ಮುಲಾಯಂ ಅವರ ಸಾವು ಹೋರಾಟ ಯುಗದ ಅಂತ್ಯ. ಮುಲಾಯಂ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಹೇಳಿದ್ದಾರೆ.

ಸಿಂಗ್ ಅವರ ತವರು ಸೈಪಾಯಿಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಯೋಗಿ ತಿಳಿಸಿದ್ದಾರೆ.

ದೂರವಾಣಿ ಕರೆ ಮೂಲಕ ಮುಲಾಯಂ ಮಕ್ಕಳಾದ ಅಖಿಲೇಶ್ ಯಾದವ್ ಹಾಗೂ ರಾಮ್ ಯಾದವ್ ಅವರಿಗೆ ಸಾಂತ್ವನ ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ (82) ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿಸೋಮವಾರ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಅ. 2ರಂದುಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು.

ಮುಲಾಯಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT