ಸೋಮವಾರ, ಡಿಸೆಂಬರ್ 5, 2022
23 °C

ತೀವ್ರ ನಿಗಾ ಘಟಕದಲ್ಲಿ ಮುಲಯಂ ಸಿಂಗ್: ತಜ್ಞ ವೈದ್ಯರ ನಿಗಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುರುಗ್ರಾಮ: ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಯಂ ಸಿಂಗ್‌ ಅವರು ಇಲ್ಲಿನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಯೇ (ಸಿಸಿಯು) ಇದ್ದು, ತಜ್ಞರ ತಂಡವು ನಿಗಾವಹಿಸಿದೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

82 ವರ್ಷದ ಮುಲಯಂ ಸಿಂಗ್ ಅವರು ಆಗಸ್ಟ್‌ 22ರಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈ ತಿಂಗಳಲ್ಲಿಯೂ ಅವರು ಕೆಲದಿನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಿಕೆಯು ತಿಳಿಸಿದೆ.

ಪುತ್ರ ಅಖಿಲೇಶ್‌ ಯಾದವ್, ಸೊಸೆ ಡಿಂಪಲ್‌ ಯಾದವ್, ಸಹೋದರ ಶಿವಪಾಲ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ‘ಆರೋಗ್ಯದ ಸ್ಥಿತಿ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಲಾಗುವುದು’ ಎಂದು ಸಮಾಜವಾದಿ ಪಕ್ಷವು ಟ್ವೀಟ್‌ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಖಿಲೇಶ್‌ ಅವರೊಂದಿಗೆ ಮಾತನಾಡಿದ್ದು, ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು