ಬುಧವಾರ, ಆಗಸ್ಟ್ 10, 2022
24 °C

ಮುಲಾಯಂ ಸಿಂಗ್‌ ಯಾದವ್‌ ಅವರ ಆರೋಗ್ಯ ಸ್ಥಿರ: ಆಸ್ಪತ್ರೆ

ಪಿಟಿಐ Updated:

ಅಕ್ಷರ ಗಾತ್ರ : | |

Mulayam Singh Yadav

ಲಖನೌ: ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ (ಎಸ್‌.ಪಿ) ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬುಧವಾರ ತಿಳಿಸಿದೆ. 

ಮೂತ್ರನಾಳ ಸಮಸ್ಯೆಯಿಂದಾಗಿ ಅವರನ್ನು ಶುಕ್ರವಾರ ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್‌ 19ರ ಪರೀಕ್ಷೆಯನ್ನೂ ಮಾಡಲಾಗಿದ್ದು, ವರದಿಯು ನೆಗೆಟಿವ್‌ ಬಂದಿದೆ. 

‘ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಅವರು ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲ’ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ರಾಕೇಶ್‌ ಕಪೂರ್‌ ತಿಳಿಸಿದ್ದಾರೆ.

80 ವರ್ಷದ ಮುಲಾಯಂ ಸಿಂಗ್‌ ಅವರು ಅಲ್ಟ್ರಾಸೌಂಡ್‌, ರಕ್ತ ಮತ್ತು ಮೂತ್ರ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು