ಶಿಮ್ಲಾ: ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ಬಹುಮಹಡಿ ಕಟ್ಟಡವೊಂದು ಕುಸಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಸಂಜೆ 5.45ರ ಹೊತ್ತಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದರು.
ಕಟ್ಟಡ ಕುಸಿತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.