ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಧಿಕೃತ ಕಾರ್ಯಕ್ರಮಗಳ ವೇಳೆ ನಡೆಯಬಹುದಾದ ಸಂಭವನೀಯ ಅಡಚಣೆ ತಪ್ಪಿಸಲು ಕಟ್ಟೆಚ್ಚರ ವಹಿಸಲಾಗಿದೆ.

ಶ್ರೀನಗರವಲ್ಲದೆ, ಭದ್ರತೆಯನ್ನು ಕಾಶ್ಮೀರದ ಇತರೆಡೆಯೂ ಬಿಗಿಗೊಳಿಸಲಾಗಿದೆ. ಮುಖ್ಯವಾಗಿ ಶ್ರೀನಗರ–ಜಮ್ಮು ಮತ್ತು ಶ್ರೀನಗರ–ಬರಾಮುಲ್ಲ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆಯೂ ಭದ್ರತೆ ಬಲಪಡಿಸಲಾಗಿದೆ. ಶಸ್ತ್ರಸಜ್ಜಿತ ಸಿಬ್ಬಂದಿ, ಪೊಲೀಸರನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಖ್ಯ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸಮೀಪದಲ್ಲಿ ಇರುವ ಎತ್ತರದ ಕಟ್ಟಡಗಳಲ್ಲಿ ಶಾರ್ಪ್ ಶೂಟರ್ಗಳನ್ನು ನಿಯೋಜಿಸಲಾಗಿದೆ. ಜತೆಗೆ ಅರೆ ಸೇನಾಪಡೆ, ಸಿಆರ್ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವೇಳೆ ಹವಾಮಾನದಲ್ಲಿ ಪ್ರತಿಕೂಲ ಬದಲಾವಣೆಗಳು ಕಂಡುಬಂದರೂ ಪೂರಕವಾಗಿ ಪರ್ಯಾಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.