ಮುಂಬೈ: ತನ್ನ ಗೆಳೆಯನ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ 16 ವರ್ಷದ ಬಾಲಕಿ ಮೇಲೆ ಉತ್ತರ ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಯವರು ತಡೆಯಬಾರದು ಎಂಬ ನಿಟ್ಟಿಯಲ್ಲಿ ಮನೆಯ ಹೊರಗಿನಿಂದ ಬಾಗಿಲಿಗೆ ಚಿಲಕ ಜಡಿದ ಆಕೆ ಗೆಳೆಯನೊಂದಿಗೆ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದಳು. ಮರುದಿನ ಅವಳು ಹೊಟ್ಟೆ ನೋವಿನಿಂದ ಬಳಲುತ್ತಿರುವಾಗ ಸಾಮೂಹಿಕ ಅತ್ಯಾಚಾರವೆಸಗಿರುವ ಬಗ್ಗೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾಳೆ. ದೂರಿನಲ್ಲಿದ್ದ ಏಳು ಜನರ ಪೈಕಿ ಆರು ಮಂದಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ' ಎಂದು ಅವರು ಹೇಳಿದರು.

ಎಲ್ಲ ಏಳು ಆರೋಪಿಗಳ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಸೇರಿ ಇತರ ಅಪರಾಧಗಳಡಿ ಪ್ರಕರಣ ದಾಖಲಾಗಿದೆ ಎಂದು ಮಲ್ವಾನಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.