ಮುಂಬೈ: ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ಹುಡುಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

'ಮುಂಬೈನ ವರ್ಸೋವಾ ಬೀಚ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿದ್ದಾರೆ ಎಂದು ಶಂಕಿಸಲಾದ ಹುಡುಗರ ಶೋಧ ಕಾರ್ಯ ನಡೆಯುತ್ತಿದೆ. ಅವರ ಜೊತೆಯಲ್ಲಿದ್ದ ಇನ್ನಿಬ್ಬರನ್ನು ರಕ್ಷಿಸಲಾಗಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಗಣೇಶ ವಿಸರ್ಜನೆ ವೇಳೆ ಐವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮಾಹಿತಿ ಬಂದಿತ್ತು. ಘಟನಾ ಸ್ಥಳಕ್ಕೆ ನಾವು ಅರ್ಧ ಗಂಟೆಯಲ್ಲಿ ತಲುಪಿದೆವು. ಇಬ್ಬರನ್ನು ರಕ್ಷಿಸಲಾಗಿದೆ. ಉಳಿದ ಮೂವರಿಗಾಗಿ ನಮ್ಮ ತಂಡವು ಶೋಧ ಕಾರ್ಯ ಮುಂದುವರೆಸಿದೆ' ಎಂದು ಅಧಿಕಾರಿ ಹೇಳಿದ್ದಾರೆ.

'ನೌಕಾಪಡೆಯ ಡೈವರ್‌ಗಳ ಸಹಾಯವನ್ನು ಕೋರಲಾಗಿದೆ. ಅಗ್ನಿಶಾಮಕ ಯಂತ್ರ, ಒಂದು ದೋಣಿ, ಜೀವರಕ್ಷಕರು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ' ಎಂದು ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.