ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ- ಪ್ರಮುಖ ಆರೋಪಿ ಬಂಧನ

Last Updated 22 ಅಕ್ಟೋಬರ್ 2021, 8:00 IST
ಅಕ್ಷರ ಗಾತ್ರ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ನಿಯಂತ್ರಣ ಸಂಸ್ಥೆಯು (ಎನ್‌ಸಿಬಿ) 24 ವರ್ಷದ ಡ್ರಗ್ ಪೆಡ್ಲರ್ ಅನ್ನು ಗುರುವಾರ ತಡರಾತ್ರಿ ಬಂಧಿಸಿದೆ.

ಬಂಧಿತ ವ್ಯಕ್ತಿಯ ಹೆಸರು ಆರ್ಯನ್‌ ಖಾನ್‌ ಅವರ ಚಾಟ್‌ಗಳಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಪ್ರಮುಖ ಆರೋಪಿ ಎಂದು ಶಂಕಿಸಲಾಗಿದೆ.

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶಾರುಕ್‌ ಖಾನ್‌ ಪುತ್ರ ಆರ್ಯನ್ ಖಾನ್ ಅಕ್ಟೋಬರ್ 2ರಿಂದ ಜೈಲಿನಲ್ಲಿದ್ದಾರೆ.

ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT