ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಕೋವಿಡ್‌ ಇಳಿಕೆ: ಆರೈಕೆ ಕೇಂದ್ರಗಳನ್ನು ಮುಚ್ಚಲು ಪಾಲಿಕೆ ನಿರ್ಧಾರ

ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ವ್ಯಾಪ್ತಿಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚುವುದಕ್ಕೆ ನಿರ್ಧರಿಸಿದೆ.

ಅಗತ್ಯವಿದ್ದಲ್ಲಿ ಸಿಯಾನ್ ಪ್ರದೇಶದಲ್ಲಿನ ಕೋವಿಡ್‌ ಆರೈಕೆ ಕೇಂದ್ರವನ್ನು ಸಿದ್ಧವಾಗಿರಿಸಲಾಗುವುದು ಎಂದು ಬಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಈವರೆರೆ 80,41,522 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಆ ಪೈಕಿ 1,48,091 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 78,79,766 ಮಂದಿ ಗುಣಮುಖರಾಗಿದ್ದಾರೆ. ಸದ್ಯ 13,665 ಸಕ್ರಿಯ ಪ್ರಕರಣಗಳಿವೆ.

ಮುಂಬೈ ನಗರದ ವಿವಿಧ ಆಸ್ಪತ್ರೆಗಳಲ್ಲಿ 11,165 ಹಾಸಿಗೆಗಳು ಲಭ್ಯವಿವೆ. ಅಗತ್ಯವಿದ್ದರೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ಬಿಎಂಸಿ ತಿಳಿಸಿದೆ.

ಸದ್ಯ ಕೋವಿಡ್ ರೋಗಿಗಳು ಚಿಂಚಪೋಕ್ಲಿಯ ಕಸ್ತೂರ್ಬಾ ಆಸ್ಪತ್ರೆಯನ್ನು ಹೊರತುಪಡಿಸಿ ನಾಲ್ಕು ಪ್ರಮುಖ ನಾಗರಿಕ ಆಸ್ಪತ್ರೆಗಳು ಮತ್ತು 16 ಉಪನಗರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆಸ್ಪತ್ರೆಗಳಿಗೆ ದಾಖಲಾಗುವ ಸೋಂಕಿತರ ಸಂಖ್ಯೆಯೂ ಕಡಿಮೆಯಾಗಿರುವುದರಿಂದ ಕೋವಿಡ್‌ ಹಾರೈಕೆ ಕೇಂದ್ರಗಳನ್ನು ಮುಚ್ಚುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಹೆಚ್ಚುವರಿ ಪುರಸಭೆಯ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 20,409 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,43,988 ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT