ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಮಗ,ಡ್ರಗ್ಸ್ ಸೇವನೆ ಅರೋಪ ಹೊತ್ತಿರುವ ಆರ್ಯನ್ ಖಾನ್ ಮತ್ತು ಇತರ ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳನ್ನು ಇಲ್ಲಿಯ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್. ಎಂ. ನೆರ್ಲೀಕರ್ ಶುಕ್ರವಾರ ತಿರಸ್ಕರಿಸಿದರು.

ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್ಸಿಬಿ) ಪರವಾಗಿ ಕೋರ್ಟ್ಗೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಆರ್ಯನ್ ಖಾನ್ ಮತ್ತು ಇನ್ನಿಬ್ಬರು ಆರೋಪಿಗಳ ಜಾಮೀನು ಅರ್ಜಿಗಳನ್ನು ವಿರೋಧಿಸಿದರು. ವಾದಗಳನ್ನು ಆಲಿಸಿದ ಬಳಿಕ, ಆರ್ಯನ್ ಖಾನ್, ಮುನ್ಮುನ್ ಧಮೆಚ ಮತ್ತು ಅರ್ಬಾಜ್ ಮರ್ಚೆಂಟ್ ಅವರಿಗೆ ಜಾಮೀನು ನೀಡಲು ಮ್ಯಾಜಿಸ್ಟ್ರೇಟ್ ನಿರಾಕರಿಸಿದರು.

ಆರ್ಯನ್ ಖಾನ್ ಮತ್ತು ಇತರ ಏಳು ಜನ ಆರೋಪಿಗಳ ಎನ್ಸಿಬಿ ಕಸ್ಟಡಿ ಮುಕ್ತಾಯವಾದ ಕಾರಣ ಕೋರ್ಟ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಅ.3ರಂದು ಮುಂಬೈ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನ ಮೇಲೆ ನಡೆಸಿದ ದಾಳಿಯಲ್ಲಿ ಆರ್ಯನ್ ಮತ್ತು ಇತರರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಈ ವರೆಗೆ 18 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎನ್ಸಿಬಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.