ಮುಂಬೈ: ಮುಂಬೈನ ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 80 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಸಂಜೆ 5.15ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಟ್ಟ ಹೊಗೆಯಿಂದಾಗಿ ಸ್ಥಳೀಯರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.