ಶನಿವಾರ, ಮೇ 21, 2022
28 °C

ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’: ಮುಂಬೈ ಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಸುಲಿಗೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಕಮಿಷನರ್, ಐಪಿಎಸ್ ಅಧಿಕಾರಿ, ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ’ ಎಂದು ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಘೋಷಿಸಿದೆ.

ನಗರದ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್ ಸಚಿನ್ ವಾಜೆ ಕೂಡ ಆರೋಪಿಯಾಗಿದ್ದಾರೆ. ಸಿಂಗ್ ಅಲ್ಲದೆ, ಸಹ ಆರೋಪಿಗಳಾದ ವಿನಯ್ ಸಿಂಗ್ ಮತ್ತು ರಿಯಾಜ್ ಭಟ್ಟಿ ಘೋಷಿತ ಅಪರಾಧಿಗಳೆಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್. ಬಿ. ಭಾಜಿಪಾಲೆ ಅವರು ಘೋಷಿಸಿದ್ದಾರೆ.

 ಪರಮ್ ಬೀರ್ ಸಿಂಗ್ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿ ಮಾಡಿದರೂ ಅವರು ಪತ್ತೆಯಾಗಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ಅಪರಾಧ ವಿಭಾಗವು ನ್ಯಾಯಾಲಯದ ಘೋಷಣೆಗೆ ಕೋರಿತ್ತು. 

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 82ರ ಅಡಿಯಲ್ಲಿ, ನ್ಯಾಯಾಲಯವು ಆರೋಪಿಯ ವಿರುದ್ಧ ಹೊರಡಿಸಲಾದ ವಾರಂಟ್ ಅನ್ನು ಕಾರ್ಯಗತಗೊಳಿಸಲು ಸಾಧ್ಯವಾಗದಿದ್ದಲ್ಲಿ ಹಾಜರಾಗಲು ಅಗತ್ಯವಿರುವ ಘೋಷಣೆಯನ್ನು ಪ್ರಕಟಿಸಬಹುದು. 

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಪರಮ್ ಬೀರ್ ಸಿಂಗ್‌ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನಂತರ ಈ ಆರೋಪವನ್ನು ನಿರಾಕರಿಸಿದ್ದರು. 

‘ಪಾಲುದಾರಿಕೆಯಲ್ಲಿ ನಡೆಸುತ್ತಿದ್ದ ಬಾರ್ ಮತ್ತು ರೆಸ್ಟೋರೆಂಟ್‌ ಮೇಲಿನ ದಾಳಿಯನ್ನು ತಡೆಯುವ ಸಲುವಾಗಿ ಪರಮ್ ಬೀರ್ ಸಿಂಗ್ ತಮ್ಮಿಂದ ₹ 9 ಲಕ್ಷ ಸುಲಿಗೆ ಮಾಡಿದ್ದಾರೆ. ಅಲ್ಲದೇ, ಸುಮಾರು  ₹ 2.92 ಲಕ್ಷ ಮೌಲ್ಯದ ಎರಡು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವಂತೆ ಒತ್ತಾಯಿಸಿದ್ದಾರೆ’ ಎಂದು ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಹೊಟೇಲ್ ಉದ್ಯಮಿ ಬಿಮಲ್ ಅಗರವಾಲ್ ಅವರು ಆರೋಪಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು