ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಪ್ರಕರಣ: ಅನಿಲ್‌ ದೇಶಮುಖ್‌ಗೆ ಜಾಮೀನು ನಿರಾಕರಣೆ

Last Updated 21 ಅಕ್ಟೋಬರ್ 2022, 11:39 IST
ಅಕ್ಷರ ಗಾತ್ರ

ಮುಂಬೈ: ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್‌ ದೇಶಮುಖ್‌ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್‌.ಎಚ್‌. ಗ್ವಾಲಾನಿ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ದೇಶಮುಖ್‌ ಅವರಿಗೆ ಈಚೆಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಎನ್‌ಸಿಪಿ ಮುಖಂಡರಾದ ದೇಶಮುಖ್‌ ಅವರನ್ನು 2021ರ ನವೆಂಬರ್‌ 2ರಂದು ಬಂಧಿಸಲಾಗಿತ್ತು. ಅನಂತರ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಧಮನಿಯ ಆಂಜಿಯೋಗ್ರಫಿಗಾಗಿ ಅವರನ್ನು ಕಳೆದ ವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT