ಟಿಆರ್ಪಿ ಹಗರಣ: ಬಾರ್ಕ್ ಮಾಜಿ ಸಿಇಒ ಪಾರ್ಥೊ ದಾಸ್ಗುಪ್ತಾಗೆ ಜಾಮೀನು ನಿರಾಕರಣೆ

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ಪಿ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೊ ದಾಸ್ಗುಪ್ತಾ ಅವರ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.
ಕಳೆದ ವರ್ಷ ಡಿಸೆಂಬರ್ 24 ರಂದು ಪಾರ್ಥೊ ದಾಸ್ಗುಪ್ತಾ ಅವರನ್ನು ಟಿಆರ್ಪಿ ಹಗರಣದಡಿ ಮುಂಬೈ ಪೊಲೀಸರು ಬಂಧಿಸಿದ್ದರು.
ಸುದ್ದಿ ಮಾಧ್ಯಮ ರಿಪಬ್ಲಿಕ್ ಟಿವಿ ಮತ್ತು ಅದರ ಹಿಂದಿ ಅವತರಣಿಕೆಯ ಟಿಆರ್ಪಿ ಅನ್ನು ಪಾರ್ಥೊ ದಾಸ್ಗುಪ್ತಾ ತಿರುಚಿದ್ದಾರೆ. ಅಲ್ಲದೆ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ದಾಸ್ಗುಪ್ತಾಗೆ ಕಾಲಕಾಲಕ್ಕೆ 'ಲಕ್ಷಗಳ ಮೊತ್ತದಲ್ಲಿ ಪಾವತಿ' ಮಾಡುತ್ತಿದ್ದರು ಎಂದು ಪೊಲೀಸರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಟಿಪ್ಪಣಿ ಸಲ್ಲಿಸಿದ್ದಾರೆ.
ಈ ಹಣದಿಂದ ದಾಸ್ಗುಪ್ತಾ ಆಭರಣಗಳು ಮತ್ತು ಇತರ ದುಬಾರಿ ವಸ್ತುಗಳನ್ನು ಖರೀದಿಸಿದ್ದರು. ಅವುಗಳನ್ನು ಅವರಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರ್ಥಿಕ ಲಾಭದ ಉದ್ದೇಶದಿಂದ ನಿರ್ದಿಷ್ಟ ಸುದ್ದಿ ವಾಹಿನಿಗಳ ಟಿಆರ್ಪಿಯನ್ನು ತಿರುಚಲು, ಬಾರ್ಕ್ ಮಾಜಿ ಸಿಒಒ ರೊಮಿಲ್ ರಾಮ್ಗಾರಿಯಾ ಕೂಡಾ ದಾಸ್ಗುಪ್ತಾ ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ವಾದಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.