ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಧಾರಾವಾಹಿ ಸೆಟ್‌ನಲ್ಲಿ ಬೆಂಕಿ

Last Updated 10 ಮಾರ್ಚ್ 2023, 15:28 IST
ಅಕ್ಷರ ಗಾತ್ರ

ಮಂಬೈ : ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಮಧ್ಯಾಹ್ನ ಟಿವಿ ಧಾರಾವಾಹಿ ‘ಗುಮ್ ಹೈ ಕಿಸಿಕೇ ಪ್ಯಾರ್ ಮೈನ್‌’ ಸೆಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸದ್ಯಕ್ಕೆ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಟುಡಿಯೊದಿಂದ ದಟ್ಟವಾದ ಕಪ್ಪು ಹೊಗೆ ಬರುತ್ತಿತ್ತು. ಕನಿಷ್ಠ 12 ಅಗ್ನಿಶಾಮಕ ವಾಹನ, ಏಳು ನೀರಿನ ಜೆಟ್ಟಿಗಳು, ಒಂದು ನೀರಿನ ಟ್ಯಾಂಕರ್, ಮೂರು ಸ್ವಯಂಚಾಲಿತ ಟರ್ನ್-ಟೇಬಲ್‌ಗಳು (ಎಡಬ್ಲ್ಯುಟಿಟಿ), ಒಂದು ತ್ವರಿತ ಪ್ರತಿಕ್ರಿಯೆ ವಾಹನ ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT