ಸೋಮವಾರ, ಸೆಪ್ಟೆಂಬರ್ 26, 2022
24 °C

ಮುಂಬೈ: ಎ.ಸಿ ಡಬಲ್ ಡೆಕರ್‌ ಬಸ್‌ಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಮೊದಲ ಹವಾನಿಯಂತ್ರಿತ ಎಲೆಕ್ಟ್ರಿಕ್‌ ಡಬಲ್ ಡೆಕರ್‌ ಬಸ್‌ಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಗುರುವಾರ ಮುಂಬೈನಲ್ಲಿ ಚಾಲನೆ ನೀಡಿದರು. 

ಬೃಹನ್‌ ಮುಂಬೈ ವಿದ್ಯುತ್‌ ಸರಬರಾಜು ಮತ್ತು ಸಾರಿಗೆ ಸಂಸ್ಥೆ (ಬಿಇಎಸ್‌ಟಿ) ಅಧೀನದಲ್ಲಿ ಈ ಬಸ್‌ ಕಾರ್ಯಾಚರಿಸಲಿದೆ.

ಅಶೋಕ್‌ ಲೇಲ್ಯಾಂಡ್‌ನ ಸ್ವಿಚ್‌ ಇಐವಿ22 ಬಸ್‌ ಅನ್ನು ಭಾರತದಲ್ಲೇ ವಿನ್ಯಾಸಗೊಳಿಸಿ ನಿರ್ಮಿಸಲಾಗಿದೆ.

‘ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಅಗತ್ಯ ಇದೆ. ಪ್ರಯಾಣಿಕರ ಸಾಂದ್ರತೆಯನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್‌ ವಾಹನಗಳಿಗೆ ಉತ್ತೇಜನ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಗಡ್ಕರಿ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು