ಗುರುವಾರ , ಅಕ್ಟೋಬರ್ 6, 2022
26 °C

ಮುಂಬೈ ದುರಂತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈನ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಲ್ಲದೆ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.

 

 

 

ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಗೋಡೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಕಂಬನಿ ಮಿಡಿದಿದ್ದು, ಗಾಯಗೊಂಡವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಭಾರಿ ಮಳೆ: ಭೂಕುಸಿತದಿಂದ 25 ಮಂದಿ ಸಾವು, ಹಲವರಿಗೆ ಗಾಯ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ನೀಡುವುದಾಗಿ ತಿಳಿಸಿದ್ದಾರೆ.

 

ಚೆಂಬೂರ್ ಹಾಗೂ ವಿಕ್ರೋಲಿಯ ದುರಂತಗಳಲ್ಲಿ ಇದುವರೆಗೆ 25 ಮಂದಿ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವ ಅಸ್ತವ್ಯಸ್ತಗೊಂಡಿದೆ. ಮುಂಬೈ ಉಪನಗರ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು