ಭಾನುವಾರ, ಜೂನ್ 20, 2021
28 °C

ಮುಂಬೈ: ಫೆಬ್ರುವರಿ 1ರಿಂದ ಸ್ಥಳೀಯ ರೈಲು ಸಂಚಾರ ಪುನರಾರಂಭ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈ ಮತ್ತು ಮುಂಬೈ ಪೆಟ್ರೊಪಾಲಿಟನ್ ಪ್ರದೇಶಗಳಲ್ಲಿ (ಎಂಎಂಆರ್) ಫೆಬ್ರುವರಿ 1ರಿಂದ ಸ್ಥಳೀಯ ರೈಲು ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಘೋಷಿಸಿದ್ದಾರೆ.

ಕೋವಿಡ್–19 ಮಾರ್ಗಸೂಚಿ ಪಾಲನೆ, ಅಂತರ ಕಾಯ್ದುಕೊಳ್ಳುವಿಕೆ ನಿಯಮಗಳನ್ನು ಪಾಲಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಜನದಟ್ಟಣೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಸದ್ಯ ರೈಲುಗಳ ಸಂಚಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ದಟ್ಟಣೆಯ ಸಮಯ ಹೊರತುಪಡಿಸಿ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು