ಗುರುವಾರ , ನವೆಂಬರ್ 26, 2020
22 °C

ಮುಂಬೈನ ಮಾಲ್‌ನಲ್ಲಿ ಬೆಂಕಿ: 3500 ಜನರ ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ ಸುಮಾರ 3500 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳಿಯಾಡಳಿತ ತಿಳಿಸಿದೆ.

ಮಾಲ್‌ನ ಎರಡನೇ ಅಂತಸ್ತಿನಲ್ಲಿದ್ದ ಮೊಬೈಲ್‌ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ 8.50ರಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಇಡೀ ಕಟ್ಟಡವನ್ನು ಬೆಂಕಿ ಆವರಿಸುತ್ತಾ ಹೋಗಿದೆ. ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಲಾಯಿತು. ಈ ವೇಳೆ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯಗಳಾದವು ಎಂದು ಬೃಹನ್‌ ಮುಂಬೈ ಪಾಲಿಕೆಯ ಮೂಲಗಳು ತಿಳಿಸಿವೆ.

24 ಅಗ್ನಿಶಾಮಕ ಯಂತ್ರಗಳು ಮತ್ತು 16 ಜಂಬೊ ಟ್ಯಾಂಕರ್‌ಗಳು ಸೇರಿದಂತೆ ಸುಮಾರು 50 ಅಗ್ನಿಶಾಮಕ ವಾಹನಗಳು ಸ್ಥಳದಲ್ಲೇ ಬೀಡು ಬಿಟ್ಟು ಬೆಂಕಿ ಆರಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. 250 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿದ್ದಾರೆ ಎಂದು ಬೃಹನ್‌ ಮುಂಬೈ ಪಾಲಿಕೆ ತಿಳಿಸಿದೆ.

ಬೆಂಕಿ ಐದನೇ ಹಂತ ತಲುಪಿದೆ ಎಂದು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಬೆಂಕಿಗೆ ಆಹುತಿಯಾಗಿರುವ ಮೂರು ಅಂತಸ್ತಿನ ಕಟ್ಟಡದಿಂದ ಸುಮಾರು 300 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು