ಶನಿವಾರ, ಡಿಸೆಂಬರ್ 5, 2020
21 °C

ಮುಂಬೈನಲ್ಲಿ ಆರದ ಬೆಂಕಿ: 36 ಗಂಟೆಗಳಿಂದ ಅಗ್ನಿಶಾಮಕ ದಳದ ಕಾರ್ಯಾಚರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮುಂಬೈ ಸಿಟಿ ಸೆಂಟರ್‌ ಮಾಲ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕಳೆದ 36 ಗಂಟೆಗಳಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಕಾರ್ಯಾಚರಣೆಯಲ್ಲಿ 18 ಅಗ್ನಿಶಾಮಕ ಯಂತ್ರ ಮತ್ತು 10 ಜಂಬೋ ಟ್ಯಾಂಕರ್‌ಗಳನ್ನು ಬಳಸಲಾಗುತ್ತಿದೆ. ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ ಸುಮಾರು 3500 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಶನಿವಾರ ಹೇಳಿದರು. 

ಇದನ್ನೂ ಓದಿ: ಮುಂಬೈನ ಮಾಲ್‌ನಲ್ಲಿ ಬೆಂಕಿ: 3500 ಜನರ ಸ್ಥಳಾಂತರ

ಗುರುವಾರ ರಾತ್ರಿ 8.50ಕ್ಕೆ ಮಾಲ್‌ನ ಎರಡನೇ ಅಂತಸ್ತಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಐವರು ಸಿಬ್ಬಂದಿಗೆ ಗಾಯಗಳಾಗಿದ್ದವು. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಮಾಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಆರಂಭದಲ್ಲಿ ಲೆವಲ್‌–1( ಮೈನರ್‌) ಎಂದು ಪರಿಗಣಿಸಿ ಕಾರ್ಯಾಚರಣೆ ಆರಂಭಿಸಲಾಯಿತು. ಆದರೆ ಬಳಿಕ ಬೆಂಕಿ ಇತರೆ ಸ್ಥಳಗಳಿಗೂ ಹರಡಿದ್ದರಿಂದ ರಾತ್ರಿ 10.45 ಕ್ಕೆ ಬೆಂಕಿಯ ಪ್ರಮಾಣ ಲೆವಲ್‌–3 ಮತ್ತು ಬೆಳಿಗ್ಗೆ 2.30ಕ್ಕೆ ಲೆವಲ್‌–4 ತನಕ ತಲುಪಿತ್ತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು